Wednesday, July 22, 2026
ಸುದ್ದಿ

ಭಾಗಮಂಡಲ ಮೇಲ್ಸೇತುವೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ-ಕಹಳೆ ನ್ಯೂಸ್

ಮಡಿಕೇರಿ: ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ.

ದಕ್ಷಿಣ ಭಾರತದ ಜೀವನದಿ ಎಂದೇ ಕರೆಯಲ್ಪಡುವ ಕಾವೇರಿ ನದಿಯ ತಟದಲ್ಲಿರುವ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಮನವಿಯ ಮೇರೆಗೆ ಈ ಅನುದಾನ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಈಗಾಗಲೇ ಕಾಮಗಾರಿಗೆ ಕಾರ್ಯಾದೇಶವೂ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮ ಮಾಹಿತಿ ನೀಡಿದೆ.

ಈ ಯೋಜನೆಯಡಿ ಮೇಲ್ಸೇತುವೆ ಆವರಣದ ಅಭಿವೃದ್ಧಿ, ನೀರು ಹರಿಯುವ ಪೈಪ್‌ಗಳ ದುರಸ್ತಿ, ಸೇತುವೆಯ ಕೆಳಭಾಗದಲ್ಲಿ ಕಾಂಕ್ರೀಟ್ ಕಾಮಗಾರಿ, ಕನ್ನಿಕೆ ನದಿಗೆ ಪಾದಚಾರಿ ಸೇತುವೆ ಹಾಗೂ ಕಾವೇರಿ ನದಿಗೆ ಪಾದಚಾರಿ ಸೇತುವೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ.
ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ. ರೋಹಿತ್ ಕಾಮಗಾರಿ ಗುತ್ತಿಗೆ ಪಡೆದಿದ್ದು, ಅಕ್ಟೋಬರ್ ಅಂತ್ಯದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಬೇಕು ಎಂದು ನಿಗಮ ಸೂಚಿಸಿದೆ.