ಕನ್ಯಾಡಿ : ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಕನ್ಯಾಡಿ ಶ್ರೀ ರಾಮ ಕ್ಷೇತ್ರ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಕನ್ಯಾಡಿ, ಜು. 20 : ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಪಂಚದಶಾನಂ ಜುನಾ ಅಖಾಡದ 1008 ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಗೌರವ ಸನ್ಮಾನ ನೆರವೇರಿಸಿದರು.
ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ, ಹರೀಶ್ ಪೂಂಜ ಅವರ ಜನಪರ ಸೇವೆ, ಅಭಿವೃದ್ಧಿ ಕಾರ್ಯಗಳು ಹಾಗೂ ಶಾಸಕನಾಗಿ ಸಲ್ಲಿಸಿರುವ ಸೇವೆಯನ್ನು ಶ್ಲಾಘಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು ಹಾಗೂ ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.











