Wednesday, July 22, 2026
ಸುದ್ದಿ

ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು ಚಿನ್ನಾಭರಣ ದೋಚಿದ ಆಸಾಮಿ!

ನೆಲಮಂಗಲ : ನಿಮ್ಮ ಮನೆ ಬಾಗಿಲಿಗೆ ಬರುವ ಅಪರಿಚಿತ ಜ್ಯೋತಿಷಿಗಳು ಅಥವಾ ಸ್ವಾಮೀಜಿಗಳ ಬಗ್ಗೆ ತೀವ್ರ ಜಾಗರೂಕರಾಗಿರಬೇಕು. ಬುಡುಬುಡುಕೆ ಸ್ವಾಮೀಜಿ ವೇಷದಲ್ಲಿ ಬಂದು, ಮನೆಯಲ್ಲಿ ಸಾವಿನ ಕಂಟಕವಿದೆ ಎಂದು ಹೆದರಿಸಿ, ಪೂಜೆಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚುವ ಶಾಕಿಂಗ್ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಬೆಳಕಿಗೆ ಬಂದಿದೆ.

ಮೋಹನ್ ಎಂಬುವರ ಮನೆಗೆ ಬಂದ ವ್ಯಕ್ತಿ, ಅವರ ಪತ್ನಿ ಉಷಾ ಎಂಟು ತಿಂಗಳ ಗರ್ಭಿಣಿಯಾಗಿರುವುದನ್ನು ಗಮನಿಸಿ, ಮನೆಗೆ ದೋಷವಿದೆ ಎಂದು ನಂಬಿಸಿದ್ದಾನೆ. ನನಗೆ ಹಣ ಬೇಡ, ಉಚಿತವಾಗಿ ಪೂಜೆ ಮಾಡುತ್ತೇನೆ ಎಂದು ಹೇಳಿ ಮನೆಯೊಳಗೆ ಪ್ರವೇಶಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೂಜೆಗಾಗಿ ಒಂದು ಕುಡಿಕೆಯಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ಹಾಕಿದರೆ ಇನ್ನಷ್ಟು ಐಶ್ವರ್ಯ ಬರುತ್ತದೆ ಎಂದು ದಂಪತಿಯನ್ನು ನಂಬಿಸಿದ್ದಾನೆ. ಅದರಂತೆ ಉಷಾ ತಮ್ಮ ಕಿವಿಯೋಲೆ, ಉಂಗುರ ಸೇರಿದಂತೆ ಚಿನ್ನಾಭರಣವನ್ನು ಕುಡಿಕೆಯಲ್ಲಿ ಹಾಕಿದ್ದಾರೆ.

ಆ ನಂತರ ನೀರು ತರುವ ನೆಪದಲ್ಲಿ ಕುಡಿಕೆಯನ್ನು ಬದಲಾಯಿಸಿದ ಖದೀಮ, ಮತ್ತೊಂದು ವಸ್ತು ನೀಡಿ ಅದನ್ನು ಕೆರೆಗೆ ಬಿಟ್ಟು ಬರಲು ಹೇಳಿದ್ದಾನೆ. ದಂಪತಿ ಮನೆಗೆ ಮರಳುವಷ್ಟರಲ್ಲಿ ಸುಮಾರು 1.20 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಆರೋಪಿ ಪರಾರಿಯಾಗಿದ್ದಾನೆಮನೆಗೆ ಬಂದು ಪರಿಶೀಲಿಸಿದಾಗ ಮೋಸವಾಗಿರುವುದು ಗೊತ್ತಾಗಿ ದಂಪತಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಆತನ ಪತ್ತೆಗೆ ಬಲೆ ಬೀಸಿದ್ದಾರೆ.