
ನವದೆಹಲಿ: ಡೆಂಗ್ಯೂ ವಿರುದ್ಧದ (Dengue Vaccine) ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲೇ ಮೊದಲ ಬಾರಿಗೆ ಡೆಂಗ್ಯೂ ತಡೆಗಟ್ಟುವ QDENGA ಲಸಿಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅನುಮೋದನೆ ನೀಡಿದೆ.
ಜಪಾನ್ ಮೂಲದ ಬಯೋಫಾರ್ಮಾ ಕಂಪನಿ ಟಕೇಡಾ ಅಭಿವೃದ್ಧಿಪಡಿಸಿರುವ ಈ ಲಸಿಕೆ 4 ರಿಂದ 60 ವರ್ಷದೊಳಗಿನವರಿಗೆ ನೀಡಲು ಅನುಮತಿ ಸಿಕ್ಕಿದೆ. ಇದರಿಂದ ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ಅಧಿಕೃತವಾಗಿ ಲಭ್ಯವಾಗಿದೆ.
ಡೆಂಗ್ಯೂ ಮೊದಲು ಬಂದಿದ್ದರೂ ಅಥವಾ ಬರದಿದ್ದರೂ ಈ ಲಸಿಕೆ ಪಡೆಯಬಹುದು. ವಿಶೇಷವೆಂದರೆ, ಲಸಿಕೆ ನೀಡುವ ಮೊದಲು ಡೆಂಗ್ಯೂ ಪರೀಕ್ಷೆ ಮಾಡಿಸಬೇಕಾದ ಅಗತ್ಯ ಇಲ್ಲ. ಇದರಿಂದ ಸಾಮಾನ್ಯ ಜನರಿಗೆ ಲಸಿಕೆ ಪಡೆಯುವುದು ಇನ್ನಷ್ಟು ಸುಲಭವಾಗಲಿದೆ.











