ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಮತ್ತು ಪ್ರಗತಿ ಆಸ್ಪತ್ರೆ ಪುತ್ತೂರು ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ-ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರಥಮ ಚಿಕಿತ್ಸೆ ಮತ್ತುCPR ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ತರಬೇತಿಯಲ್ಲಿ ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಗೊಂಡ ವ್ಯಕ್ತಿಗೆ ತಕ್ಷಣ ನೀಡಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ವಿವರವಾಗಿ ತಿಳಿಸಲಾಯಿತು.
ಉಸಿರಾಟ ನಿಂತಾಗ CPR ನೀಡುವ ವಿಧಾನ, ಬಾಯಿಯಿಂದ ಬಾಯಿಗೆ ಉಸಿರಾಟ, ಎದೆ ಒತ್ತುವಿಕೆ ಮಾಡುವ ವಿಧಾನಗಳನ್ನು ಪ್ರಾಯೋಗಿಕವಾಗಿ ತಿಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿ ಕುಮಾರಿ ಶ್ರೇಯ, ಪೇಷಂಟ್ ಕೌನ್ಸಿಲರ್ ಶ್ರೀಮತಿ ಚೈತ್ರ, ಆಂಬುಲೆನ್ಸ್ ಚಾಲಕ ಶ್ರೀ ವೆಂಕಟೇಶ ಉಪಸ್ಥಿತರಿದ್ದು CPR ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಯನ್ನು ನೀಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಶ್ರೀಮಾನ್ ಗಣರಾಜ ಕುಂಬ್ಳೆ ಅವರು ವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಯೋಗ ತರಬೇತಿದಾರಾದ ಶ್ರೀಮಾನ್ ಅಶೋಕ್ ಅಂಬಟ ಅವರ ಸಹ ಕಾರದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.
ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾದ ಶ್ರೀಮಾನ್ ರಾಜಗೋಪಾಲ್ ಎನ್ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನ ಮಾತಾಜಿ ಧನ್ಯವಾದ ಅರ್ಪಿಸಿದರು. ಶ್ರೀಮತಿ ಭವಿತಾ ಮಾತಾಜಿ ಅವರು ಕಾರ್ಯಕ್ರಮ ನಿರೂಪಿಸಿದರು.











