
ನವದೆಹಲಿ : ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್ಗೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು 70 ರೂ ಜಂಪ್ ಪಡೆದಿದೆ. ಕಳೆದ ಮೂರ್ನಾಲ್ಕು ದಿನದಲ್ಲಿ ಬಂಗಾರದ ದರ ಒಂದು ಗ್ರಾಮ್ಗೆ 155 ರೂನಷ್ಟು ಹೆಚ್ಚಳಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 21ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,220 ರೂ
- ಚೆನ್ನೈ: 13,220 ರೂ
- ಮುಂಬೈ: 13,220 ರೂ
- ದೆಹಲಿ: 13,235 ರೂ
- ಕೋಲ್ಕತಾ: 13,220 ರೂ
- ಕೇರಳ: 13,220 ರೂ
- ಅಹ್ಮದಾಬಾದ್: 13,225 ರೂ
- ಜೈಪುರ್: 13,235 ರೂ
- ಲಕ್ನೋ: 13,235 ರೂ
- ಭುವನೇಶ್ವರ್: 13,220 ರೂ











