Wednesday, July 22, 2026
ಸುದ್ದಿ

24 ಗಂಟೆಯೊಳಗೆ ಆರೋಪಿ ಕಾರ್ಮಿಕ ಅರೆಸ್ಟ್ , 6.37 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ-ಕಹಳೆ ನ್ಯೂಸ್

ಮಂಗಳೂರು : ಮನೆಯ ಕಾಮಗಾರಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ 6.37 ಲಕ್ಷ ರೂ. ಮೌಲ್ಯದ 49 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶದ ಬಲರಾಮ್ ಪುರ್ ಮೂಲದ ಪ್ರಸ್ತುತ ಮಂಗಳೂರಿನ ಬಂದರು ಅಜಿಜುದ್ದೀನ್ ರಸ್ತೆ ನಿವಾಸಿ ಜಹೀರುದ್ದೀನ್ (24) ಬಂಧಿತ ಆರೋಪಿ.

ಇತ್ತೀಚೆಗೆ ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲ್ ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ನಡೆಸಿದ್ದರು. ಈ ವೇಳೆ ಮನೆಯ ಟೇಬಲ್ ಡ್ರಾವರ್ ನ ಸಣ್ಣ ಪರ್ಸ್ ನಲ್ಲಿ ಇಟ್ಟಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿ ಸುಮಾರು 6,37,000 ರೂ. ಬೆಲೆಯ ಸೊತ್ತುಗಳು ಕಳವು ಆಗಿದ್ದವು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 68/2026 ಕಲಂ 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಮನೆ ಕೆಲಸಕ್ಕೆ ಇದ್ದ ಕೆಲಸಗಾರರನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಆರೋಪಿ ಜಹೀರುದ್ದೀನ್ ಚಿನ್ನಾಭರಣ ಹಾಗೂ ವಾಚನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಹಾಗೂ ವಾಚನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಮುಂದಿನ ಕ್ರಮದ ಕುರಿತು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಡಿ.ಅರ್ ಮಂಜಪ್ಪ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್.ಡಿ ಹಾಗೂ ಠಾಣೆಯ ಸಿಬ್ಬಂದಿಯ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸುವಲ್ಲಿ ಯಶಸ್ವಿಯಾಗಿದೆ.