Wednesday, July 22, 2026
ಜಿಲ್ಲೆಮೈಸೂರುಸುದ್ದಿ

ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ – ಕಹಳೆ ನ್ಯೂಸ್

ಮೈಸೂರು: ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಆರೋಪದಡಿ ಯುವಕನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

23 ವರ್ಷದ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ತಿಳಿದ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.