Wednesday, July 22, 2026
ಸುದ್ದಿ

ತುಮಕೂರು – ಬೆಂಗಳೂರು ಹೈವೇಯಲ್ಲಿ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿ; ಅನಿಲ ಸೋರಿಕೆ-ಕಹಳೆ ನ್ಯೂಸ್

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಕ್ಲೋರೈಡ್ ಕೆಮಿಕಲ್  ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ  ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.

ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನೂ ಅಪಾಯಕಾರಿ ಕ್ಲೋರೈಡ್ ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಲಾರಿ ತೆರವಿಗೆ ಕಾರ್ಯಚರಣೆ ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಘಟನೆಯಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಭಯದಿಂದ ವಾಹನ ಸವಾರರು ಸಂಚಾರ ಮಾಡುವಂತಾಗಿದೆ.