Thursday, July 23, 2026
ಸುದ್ದಿ

ದುರಾಸೆಯೇ ಭ್ರಷ್ಟಾಚಾರಕ್ಕೆ ಮೂಲ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಕಳಕಳಿ- ಕಹಳೆ ನ್ಯೂಸ್

“ಸಮಾಜದಲ್ಲಿ ಇಂದು ಕಾಣಿಸುತ್ತಿರುವ ಭ್ರಷ್ಟಾಚಾರಕ್ಕೆ ಮನುಷ್ಯನ ದುರಾಸೆಯೇ ಮೂಲ ಕಾರಣ. ಕೇವಲ ಕಾನೂನುಗಳಿಂದ ಇದನ್ನು ತಡೆಯಲು ಸಾಧ್ಯವಿಲ್ಲ; ತೃಪ್ತ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳಿಂದ ಮಾತ್ರ ಇಂದಿನ ಪರಿಸ್ಥಿತಿಯನ್ನು ಉತ್ತಮಪಡಿಸಲು ಸಾಧ್ಯ,” ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಅವರು ಪತ್ರಿಕಾ ಮಾಧ್ಯಮ ಕ್ಕೆ ​’ ನೀಡಿದ ವಿಶೇಷ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರು ಬಿಡದಿ ಟೌನ್‌ಶಿಪ್ ಯೋಜನೆ, ಎಸ್‌ಐಆರ್ (SIR), ಆರ್‌ಎಸ್‌ಎಸ್ (RSS) ನೋಂದಣಿ ಸೇರಿದಂತೆ ರಾಜ್ಯದ ಹಲವು ಪ್ರಸ್ತುತ ಮತ್ತು ವಿವಾದಿತ ವಿಷಯಗಳ ಕುರಿತು ಮುಕ್ತವಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಬಿಡದಿ ಟೌನ್‌ಶಿಪ್ ಯೋಜನೆ ಮತ್ತು ಆಡಳಿತದ ವಿಳಂಬ:
ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆ ನನೆಗುದಿಗೆ ಬಿದ್ದಿರುವ ಕುರಿತು ಮಾತನಾಡಿದ ನ್ಯಾಯಮೂರ್ತಿಗಳು, ಬೃಹತ್ ಯೋಜನೆಗಳು ರಾಜಕೀಯ ಇಚ್ಛಾಶಕ್ತಿಯ ಕೊರತೆ ಮತ್ತು ಆಡಳಿತಾತ್ಮಕ ಹಿತಾಸಕ್ತಿಗಳ ಸಂಘರ್ಷದಿಂದ ಹೇಗೆ ನಲುಗುತ್ತವೆ ಎಂಬುದನ್ನು ವಿವರಿಸಿದರು. ಇಂತಹ ಯೋಜನೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದಿದ್ದರೆ ಅದು ಸಾರ್ವಜನಿಕ ಹಣದ ಪೋಲಿಗೆ ದಾರಿಯಾಗುತ್ತದೆ ಎಂದು ಎಚ್ಚರಿಸಿದರು. ಅಭಿವೃದ್ಧಿಯ ಹೆಸರಿನಲ್ಲಿ ರೈತರ ಮತ್ತು ಸ್ಥಳೀಯರ ಹಿತಾಸಕ್ತಿಗಳನ್ನು ಬಲಿಗೊಡಬಾರದು. ಕಾನೂನಿನ ಚೌಕಟ್ಟಿನಲ್ಲೇ ಎಲ್ಲಾ ಪ್ರಕ್ರಿಯೆಗಳು ನಡೆಯಬೇಕು ಮತ್ತು ಇದರಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಆಸ್ಪದ ಇರಬಾರದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

​ಮಾನವೀಯತೆಯೇ ಏಕೈಕ ಮದ್ದು:
​ಭ್ರಷ್ಟಾಚಾರದ ವಿರುದ್ಧದ ಹೋರಾಟ ಕೇವಲ ನ್ಯಾಯಾಲಯ ಅಥವಾ ಲೋಕಾಯುಕ್ತ ಸಂಸ್ಥೆಗಳಿಂದ ಮಾತ್ರ ಯಶಸ್ವಿಯಾಗುವುದಿಲ್ಲ. ಪ್ರತಿಯೊಬ್ಬ ನಾಗರಿಕನೂ ತನ್ನ ಜೀವನದಲ್ಲಿ ತೃಪ್ತಿಯನ್ನು ರೂಢಿಸಿಕೊಂಡಾಗ ಮತ್ತು ಇತರರ ಪ್ರತಿh ಮಾನವೀಯತೆಯಿಂದ ನಡೆದುಕೊಂಡಾಗ ಮಾತ್ರ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂದು ಕರೆ ನೀಡಿದರು.