Recent Posts

Saturday, September 12, 2026
ಸುದ್ದಿ

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಅಕ್ರಮ : 768 ಕೋಟಿ ಅವ್ಯವಹಾರದ ತನಿಖಾ ವರದಿ ಬಹಿರಂಗ – ಕಹಳೆ ನ್ಯೂಸ್

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದ ಪ್ರಕರಣದ ತನಿಖಾ ವರದಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. 768 ಕೋಟಿ ರೂ. ಅವ್ಯವಹಾರ ನಡೆದಿದ್ದು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಅಕ್ರಮದ ತನಿಖಾ ವರದಿ ಇದಾಗಿದೆ.

ಜಾಹೀರಾತು

ಸರ್ವೇ ಸೂಪರ್ ವೈಸರ್ ಹಾಗೂ ಕೋಲಾರ (Kolar) ಮಾಜಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 435 ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ತಹಶೀಲ್ದಾರ್, ಎಡಿಎಲ್‌ಆರ್, ಡಿಡಿಎಲ್‌ಆರ್ ನಕಲಿ ಸೀಲುಗಳು ಪತ್ತೆಯಾಗಿದ್ದವು. 128 ಮೂಲ ಸರ್ಕಾರಿ ದಾಖಲೆಗಳು ಸಿಕ್ಕಿದ್ದವು. ಮಂಜೂರಾತಿ ರಿಜಿಸ್ಟರ್, ಪಟ್ಟಾ ಪುಸ್ತಕ, ಖರ್ದಾ ರಿಜಿಸ್ಟರ್, ಪೋಡಿ ದಾಖಲೆಗಳು ಸಹ ಇಲ್ಲಿ ಪತ್ತೆಯಾಗಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ಕಾರಿ ಕಚೇರಿಯಲ್ಲಿ ಇರಬೇಕಾದ ದಾಖಲೆಗಳು ಸುರೇಶ್ ಬಾಬು ಫಾರ್ಮ್ ಹೌಸ್‌ನಲ್ಲಿ ಪತ್ತೆಯಾಗಿದ್ದವು. ಇವುಗಳನ್ನು ಪರಿಶೀಲನೆ ನಡೆಸಿದಾಗ ಕೋಲಾರ ಹಾಗೂ ಮಾಲೂರು ತಾಲೂಕಿನ ಸುಮಾರು 485 ಎಕರೆ ಅಕ್ರಮ ಭೂ ಮಂಜೂರಾತಿ ಮಾಡಿರುವುದು ಬೆಳಕಿಗೆ ಬಂದಿತ್ತು. ಇದರಿಂದ ಸರ್ಕಾರಕ್ಕೆ 768 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.