Recent Posts

Friday, September 11, 2026
ದೆಹಲಿರಾಜ್ಯಸುದ್ದಿ

ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಹತ್ಯೆ : ಲಿವ್‌ ಇನ್‌ ಪ್ರಿಯಕರ ಅರೆಸ್ಟ್‌ – ಕಹಳೆ ನ್ಯೂಸ್

ನವದೆಹಲಿ: ಕೆನಡಾದ  ಎಡ್ಮಂಟನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು  ಆಕೆಯ ಲಿವ್‌ ಇನ್‌  ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಪಂಜಾಬ್‌ನ  ಲುಧಿಯಾನ ಜಿಲ್ಲೆಯ ಸಮ್ರಾಲಾ ಮೂಲದ ದಮನ್‌ಪ್ರೀತ್ ಕೌರ್ (23) ಹತ್ಯೆಯಾದ ಮಹಿಳೆ. ಆಕೆಯ ಪ್ರಿಯಕರ ರಿತೀಶ್ ಕುಮಾರ್ (22) ಕೊಲೆಗೈದ ಪ್ರಿಯಕರನಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜು.9 ರಂದು ರಿತೀಶ್‌ ಆಕೆಯ ಕತ್ತು ಹಿಸುಕಿ, ಮಾರಣಾಂತಿಕ ಹಲ್ಲೆ ಮಾಡಿದ್ದ. ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಳು.

ತನಿಖೆ ನಡೆಸಿದ ಪೊಲೀಸರು ಜುಲೈ 14 ರಂದು ಇದು ಕೊಲೆ ಎಂದು ಘೋಷಿಸಿದ್ದರು. ಜು.22 ರಂದು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜುಲೈ 23 ರಂದು ಪೊಲೀಸರು ಮಹಿಳೆಯನ್ನು ಕತ್ತು ಹಿಸುಕಿಕೊಲೆ ಮಾಡಲಾಗಿದೆ ಎಂದು ಬಹಿರಂಗಪಡಿಸಿದರು. ತನಿಖೆ ಕಾರಣದಿಂದಾಗಿ ಈ ವಿಚಾರವನ್ನು ಪೊಲೀಸರು ಅಲ್ಲಿಯ ತನಕ ತಡೆಹಿಡಿದಿದ್ದರು.

ಹತ್ಯೆಯಾದ ಕೌರ್ ಅವರ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, GoFundMe ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸಹಾಯಕ್ಕಾಗಿ ಮನವಿ ಮಾಡಲಾಗಿದೆ. ದೇಣಿಗೆ ಮೂಲಕ ಸುಮಾರು 18 ಲಕ್ಷ ರೂ.ಗಳನ್ನು ಇಲ್ಲಿಯವರೆಗೆ ಸಂಗ್ರಹಿಸಲಾಗಿದೆ.