ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವರ ಸ್ಥಾನಕ್ಕೆ ರಾಜೀನಾಮೆ –ಕಹಳೆ ನ್ಯೂಸ್

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರೀತಿ ಪ್ರತಿಭಟನೆಗೆ ಬಗ್ಗಿ ರಾಜೀನಾಮೆ ಸಲ್ಲಿಸಿರುವುದು ಅಪರೂಪದ ಸಂಗತಿಯಾಗಿದೆ. ಈ ಹಿಂದೆ 2018ರಲ್ಲಿ ಲೈಂಗಿಕ ಕಿರುಕುಳ ಆರೋಪದಲ್ಲಿ ಆಕ್ರೋಶ ಎದುರಿಸಿದ್ದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಸ್ಥಾನಕ್ಕೆ ಎಂಜೆ ಅಕ್ಬರ್ ( MJ Akbar) ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸುಮಾರು 8 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರೊಬ್ಬರು ಪ್ರತಿಭಟನೆಗೆ ಮಣಿದು ರಾಜೀನಾಮೆ ನೀಡಿರುವುದು.











