Recent Posts

Saturday, September 12, 2026
ಸುದ್ದಿ

ಸಂಶಯಾಸ್ಪದ ರೀತಿಯಲ್ಲಿ ಕಾಡಾನೆ ಸಾವು : ಅಮ್ಮನ ಬಳಿ ನಿಂತು ಮರಿ ಆನೆ ರೋಧನೆ- ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆನಂದಪುರ ಸಮೀಪದ ಕೌರಿಕಾಡು ಎಸ್ಟೇಟ್ ಕಾಫಿ ತೋಟದ ಮಧ್ಯೆ ಸಂಶಯಾಸ್ಪದ ರೀತಿಯಲ್ಲಿ ಹೆಣ್ಣು ಕಾಡಾನೆ ಮೃತಪಟ್ಟಿರುವ ಘಟನೆ ನಡೆದಿದೆ.ಮತ್ತೊಂದು ಕಡೆ ಮೃತಪಟ್ಟ ತಾಯಿ ಆನೆಯ ಬಳಿಯೇ ಮರಿ ಆನೆ ನಿಂತು ಚೀರಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ.

ಜಾಹೀರಾತು

ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಮರಿ ಆನೆ ಮೂಕರೋಧನೆ ಅನುಭವಿಸಿದೆ. ಆನೆ ಮರಿಯ ಚೀರಾಟದ ಶದ್ಧ ಕೇಳಿ ಸ್ಥಳೀಯರು ಸ್ಥಳಕ್ಕೆ ಬಂದು ನೋಡಿದಾಗ ಹೆಣ್ಣಾನೆ ಸತ್ತು ಬಿದ್ದಿರುವುದು ಕಂಡುಬಂದಿದೆ. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲೂ ಹರಿದಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣವೇ ಸ್ಥಳೀಯರು ಅರಣ್ಯ ಇಲಾಖೆಗೆ  ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆಗೆ ಗುಂಡು ತಗುಲಿದೆಯೇ ಅಥವಾ ಅನಾರೋಗ್ಯದಿಂದ ಸಾವನ್ನಪ್ಪಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಆನೆಯ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.