Recent Posts

Saturday, September 12, 2026
ಸುದ್ದಿ

ಪಂಜಾಬ್‌ನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ-ಕಹಳೆ ನ್ಯೂಸ್

ಚಂಡೀಗಢ: ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಭಾರತೀಯ ಜನತಾ ಪಾರ್ಟಿ ಕಚೇರಿಯ ಮೇಲೆ ಸೋಮವಾರ ತಡರಾತ್ರಿ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್  ಎಸೆದಿರುವ ಘಟನೆ ನಡೆದಿದೆ.

ಜಾಹೀರಾತು

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿ, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಸಂಗ್ರೂರ್ ಎಸ್ಪಿ-ಡಿ ದೇವಿಂದರ್ ಅತ್ರಿ, ಮಾಹಿತಿ ಸಿಗುತ್ತಿದ್ದಂತೆ ನಾನು, ಡಿಎಸ್‌ಪಿ ಹಾಗೂ ಸಂಗ್ರೂರ್ ಎಸ್‌ಎಚ್‌ಒ ಅವರೊಂದಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಬೀರ್ ಬಾಟಲಿಯಲ್ಲಿ ಪೆಟ್ರೋಲ್ ತುಂಬಿ ಅದನ್ನು ಪೆಟ್ರೋಲ್ ಬಾಂಬ್ ಆಗಿ ಪರಿವರ್ತಿಸಿ ಕಚೇರಿಯ ಮೇಲೆ ಎಸೆಯಲಾಗಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಪರಿಸರದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ಈ ಕೃತ್ಯದ ಹಿಂದೆ ಇರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿರುವ ಪೊಲೀಸರು, ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.