Monday, July 27, 2026
ಸುದ್ದಿ

ಶಾಸಕರಿಂದ ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ – ವಿವಿಧ ಸವಲತ್ತು ವಿತರಣೆ – ವಿವಿಧ ರಸ್ತೆಗಳ ಉದ್ಘಾಟನೆ – ಕಹಳೆ ನ್ಯೂಸ್

ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತು ವಿತರಣೆ ವಿತರಣೆ ಕಾರ್ಯಕ್ರಮ ಇಂದು ದಿನಾಂಕ 27-07-2026 ರಂದು ಆತ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ 14 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 4 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ಸಾಹಯಧನ 2 ಫಲಾನುಭವಿಗಳಿಗೆ ಶವಸಂಸ್ಕಾರ ಸಹಾಧನ 5 ಶೇಖಡಾ ಅನುದಾನದಲ್ಲಿ 20 ಜನ ಫಲಾನುಭವಿಗಳಿಗೆ ವಿಕಲಚೇತನರಿಗೆ ಸಹಾಧನ ವಿತರಣೆ ಮಾಡಲಾಯಿತು. ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಆತ್ರಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸಂದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಿದ್ದೇಶ್, ಗ್ರಾಮ ಆಡಳಿತಾಧಿಕಾರಿಗಳಾದ ಸುಮಿತ್ರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.