Monday, July 27, 2026
ಸುದ್ದಿ

ದುಬೈ – ಮುಂಬೈ ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ : ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ಗಾಂಧಿನಗರ: ದುಬೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ (ಲಗೇಜ್‌ ತುಂಬುವ ಸ್ಥಳ) ಹೊಗೆ ಕಾಣಿಸಿಕೊಂಡಿದ್ದು, ಗುಜರಾತ್‌ನ ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

194 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಇಂಡಿಗೋ 6E 1452 ವಿಮಾನ ಹಾರಾಟದಲ್ಲಿದ್ದಾಗಲೇ ಕಾರ್ಗೋ ಹೋಲ್ಡ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಪೈಲಟ್‌ ರಾಜ್‌ಕೋಟ್ ವಿಮಾನ ನಿಲ್ದಾಣವನ್ನು ಸಂಪರ್ಕಿಸಿ, ತುರ್ತು ಲ್ಯಾಂಡಿಂಗ್‌ಗೆ ಅನುಮತಿ ಕೇಳಿದ್ದರು. ಬಳಿಕ ವಿಮಾನ ತುರ್ತು ಭೂಸ್ಪರ್ಶಕ್ಕೆ ಅಧಿಕಾರಿಗಳು ಅನುಮತಿ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಮಾನ ತುರ್ತು ಭೂಸ್ಪರ್ಶದ ವೇಳೆ, ಏರ್‌ಪೋರ್ಟ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಬಳಿಕ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಗಿದೆ. ಲ್ಯಾಂಡಿಂಗ್ ನಂತರ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ಇಳಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ನಿರ್ದೇಶಕ ದಿಗಂತ ಬೋರಾ ಅವರು, ದುಬೈನಿಂದ ಮುಂಬೈಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನವು ಕಾರ್ಗೋ ಹೋಲ್ಡ್ ಪ್ರದೇಶದಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನ ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.