Tuesday, July 28, 2026
ಸುದ್ದಿ

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಆರೆಂಜ್‌ ಅಲರ್ಟ್‌ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು : ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಜುಲೈ 28 ಹಾಗೂ 29ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವಡೆ ಭಾರಿ ಮಳೆಯಾಉವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಜುಲೈ 28ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ 29ಕ್ಕೂ ಕರಾವಳಿ, ಮಲೆನಾಡಿನಲ್ಲಿ ಮಳೆ
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 29ರಂದೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಗದಗ, ಬಾಗಲಕೋಟೆ, ಬೀದರ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುವ ಮುನ್ಸೂಚನೆ ಇದೆ ಎಂದು ತಿಳಿಸಲಾಗಿದೆ.