Recent Posts

Sunday, September 13, 2026
ಸುದ್ದಿ

ಕೇರಳದಲ್ಲಿ ಮತ್ತೆ ಮಳೆಯ ಅಬ್ಬರ : ಕಾಸರಗೋಡು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್-ಕಹಳೆ ನ್ಯೂಸ್

ತಿರುವನಂತಪುರ : ಕೆಲ ದಿನಗಳ ವಿರಾಮದ ಬಳಿಕ ಕೇರಳದಲ್ಲಿ ಮಳೆ ಮತ್ತೆ ಬಿರುಸುಗೊಳ್ಳುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಹಾಗೂ ಪೂರ್ವ ಅರಬ್ಬಿ ಸಮುದ್ರದ ಮೇಲಿನ ಚಂಡಮಾರುತ ವಲಯದ ಪರಿಣಾಮ ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು

ಇದರ ಹಿನ್ನೆಲೆಯಲ್ಲಿ ಇಂದು ಕಾಸರಗೋಡು, ಕಣ್ಣೂರು, ಎರ್ನಾಕುಳಂ, ತ್ರಿಶೂರ್ ಹಾಗೂ ಮಲಪ್ಪುರಂ, ಕೋಝಿಕ್ಕೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು