Wednesday, July 29, 2026
ಸುದ್ದಿ

ಲಾವಣ್ಯ ಕೊಲೆ ಪ್ರಕರಣ; 11 ದಿನಗಳ ಚಿಕಿತ್ಸೆಯ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು : ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಚೇತನ್‌ರನ್ನು 11 ದಿನಗಳ ಆಸ್ಪತ್ರೆ ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಜುಲೈ 16ರಂದು ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಕಡಿದು ಹತ್ಯೆಗೈದಿದ್ದ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಡೆದ ಬಳಿಕ ಚೇತನ್ ಕಾರಿನಲ್ಲಿ ಪರಾರಿಯಾಗಿದ್ದ. ಆದರೆ ಮರುದಿನವೇ ಮಂಗಳೂರಿನಲ್ಲಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧನದ ವೇಳೆ ಆತ ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದರಿಂದ, ಮೊದಲಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

ವೈದ್ಯರ ಸಲಹೆಯಂತೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆರಂಭದಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಗೊಂಡಿದ್ದ.

ಪ್ರಸ್ತುತ ಆರೋಗ್ಯ ಸ್ಥಿರಗೊಂಡಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಬಳಿಕ ಚೇತನ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇದ್ರ ಹಿನ್ನಲೆಯಲ್ಲಿ ಮಂಗಳವಾರ ಆರೋಪಿ ಚೇತನ್ ನನ್ನ ಘಟನಾ ನಡೆದ ಸ್ಥಳಕ್ಕೆ ಸ್ಥಳ ಮಹಜರಿಗಾಗಿ ಕರೆತರಲಾಗಿತ್ತು .ಬಿಗಿ ಪೊಲೀಸ್ ಬಂದೂಬಸ್ತಿನಲ್ಲಿ ಚೇತನನ್ನ ಪೊಲೀಸರು ಕರೆತಂದಿದ್ದರು

ಈ ಕೊಲೆ ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅನಂತಪದ್ಮನಾಭ ಅವರ ನೇತೃತ್ವದಲ್ಲಿ, ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಯಶ್ ಕುಮಾರ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ.