Thursday, July 30, 2026
ಸುದ್ದಿ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ಯಶಸ್ವಿ – ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು (NMC), ಸುಳ್ಯ ಹಾಗೂ ಎನ್.ಎಂ.ಪಿ.ಯು.ಸಿ. (NMPUC), ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ “ಮಾದಕ ವ್ಯಸನ

ವಿರೋಧಿ ಜಾಗೃತಿ ಕಾರ್ಯಕ್ರಮ–2026″ ಅನ್ನು ಜುಲೈ 29 ರಂದು ಬೆಳಿಗ್ಗೆ 11.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಹಾಗೂ ಆರೋಗ್ಯಕರ, ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಶ್ರೀಮತಿ ಮಂಜುಳಾಸುಳ್ಯ ವೃತ್ತ ನಿರೀಕ್ಷಕರಾದ ಶ್ರೀ ತಿಮ್ಮಪ್ಪ ನಾಯಕ್ಸುಳ್ಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಸಂತೋಷ್ ಬಿ.ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಶ್ರೀ ಚಂದ್ರಶೇಖರ್ ಪೆರಾಲ್, ಹಾಗೂ ಎನ್.ಎಂ.ಪಿ.ಯು.ಸಿ. ಸುಳ್ಯದ ಪ್ರಾಂಶುಪಾಲೆ ಶ್ರೀಮತಿ ಮಿಥಾಲಿ ಪಿ. ರೈ ಉಪಸ್ಥಿತರಿದ್ದರು.

ಶ್ರೀಮತಿ ಮಂಜುಳಾ, ತಹಶೀಲ್ದಾರ್, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ವ್ಯಸನಗಳಿಗೆ ಒಳಗಾಗದೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.

ಶ್ರೀ ತಿಮ್ಮಪ್ಪ ನಾಯಕ್, ವೃತ್ತ ನಿರೀಕ್ಷಕರು, ಮಾದಕ ವಸ್ತುಗಳ ಬಳಕೆ, ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಕಾನೂನುಗಳು ಮತ್ತು ಶಿಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಾದಕ ವ್ಯಸನದ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದರು.