Friday, July 31, 2026
ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ವ್ಯಾಸ ಪೂರ್ಣಿಮೆ ಆಚರಣೆ – ಕಹಳೆ ನ್ಯೂಸ್

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಂಸ್ಕೃತ ವಿಭಾಗದಿಂದ IQAC ಸಹಯೋಗದೊಂದಿಗೆ  (ಆಷಾಢ ಶುಕ್ಲ ಪೂರ್ಣಿಮಾ) ವ್ಯಾಸ ಪೂರ್ಣಿಮಾ/ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು. ಪಡ್ನೂರಿನ ಬೇರಿಕೆ ಶಿಶುಮಂದಿರದ ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಪವಿತ್ರ ವಿಜಯನಾರಾಯಣ ಕುಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿ ಗುರು ಪೂರ್ಣಿಮೆಯ ಮಹತ್ವವನ್ನು ತಿಳಿಸಿಕೊಟ್ಟರು.

ವಿದ್ಯಾರ್ಥಿಗಳು ಶಿಕ್ಷಕರ ಪಾದಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಗುರುವಂದನೆ ಸಲ್ಲಿಸಿ ಗುರುಗಳ ಆಶೀರ್ವಾದವನ್ನು ಪಡೆದರು. ವ್ಯಾಸ ಪೂರ್ಣಿಮೆ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಂI ವಿಡಿಯೋ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರ ಬಹುಮಾನ ವಿತರಣೆಯೂ ಸಹ ಈ ಸಂದರ್ಭದಲ್ಲಿ ನಡೆಯಿತು. ಉಪಪ್ರಾಂಶುಪಾಲರಾದ ಸುಕನ್ಯಾ ಮಾತಾಜಿ ಹಾಗೂ ಸಂಸ್ಕೃತ ಉಪನ್ಯಾಸಕಿ ಪ್ರಸನ್ನಾ ಮಾತಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ವಾಗತ, ಧನ್ಯವಾದ ಸೇರಿದಂತೆ ಕಾರ್ಯಕ್ರಮ ನಿರ್ವಹಣೆಯು ಸಂಸ್ಕೃತ ಭಾಷೆಯಲ್ಲಿ ನೆರವೇರಿದ್ದು ಅಂತಿಮ ಬಿಸಿಎ ವಿದ್ಯಾರ್ಥಿ ಜಯಸೂರ್ಯ ಸ್ವಾಗತಿಸಿ, ಪ್ರಥಮ ಬಿಕಾಂ ವಿದ್ಯಾರ್ಥಿನಿ ಕು. ಅನನ್ಯಾ ವಂದಿಸಿ, ದ್ವಿತೀಯ ಬಿ ಎ ವಿದ್ಯಾರ್ಥಿನಿ ಕು. ಅಕ್ಷತಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.