
ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ.
ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ.
ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.











