Saturday, August 1, 2026
ಬೆಂಗಳೂರುರಾಜ್ಯಸುದ್ದಿ

ಬುದ್ಧಿಗೆ ಸವಾಲ್ ಎಸೆಯಲು ಬರ್ತಿದ್ದಾಳೆ ‘ಡಿಟೆಕ್ಟಿವ್ ತೀಕ್ಷ್ಣ’ :  ಆಗಸ್ಟ್ 7ಕ್ಕೆ ಗ್ರ್ಯಾಂಡ್ ರಿಲೀಸ್! – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಬಹುಚರ್ಚೆಗೆ ಗ್ರಾಸವಾಗಿರುವ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’. ನಟಿ ಅಭಿನಯದ 50ನೇ ಮೈಲಿಗಲ್ಲಿನ ಚಿತ್ರವಾಗಿರುವ ಈ ಸಿನಿಮಾ, ಬಿಡುಗಡೆಯ ಮುನ್ನವೇ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ಪಡೆದುಕೊಂಡಿದ್ದು, ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ರಹಸ್ಯ, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ಅವರು ಚಾಣಾಕ್ಷ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಬುದ್ಧಿವಂತಿಕೆಯಿಂದ ಸಂಕೀರ್ಣ ಪ್ರಕರಣಗಳನ್ನು ಭೇದಿಸುವ ಪಾತ್ರದಲ್ಲಿ ಮಿಂಚಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವೈವಿಧ್ಯಮಯ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಪ್ರಿಯಾಂಕಾ ಉಪೇಂದ್ರ ಅವರಿಗೆ ಈ ಸಿನಿಮಾ ವಿಶೇಷ ಮೈಲಿಗಲ್ಲಾಗಿದೆ. ಅವರ ಸಿನಿ ಪಯಣದ 50ನೇ ಚಿತ್ರವಾಗಿರುವ ‘ಡಿಟೆಕ್ಟಿವ್ ತೀಕ್ಷ್ಣ’ ಆಗಸ್ಟ್ 7ರಂದು ರಾಜ್ಯಾದ್ಯಂತ ತೆರೆಗೆ ಬರಲಿದ್ದು, ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಹಾಗಾದರೆ ಈ ಬುದ್ಧಿವಂತಿಕೆಯ ಆಟದಲ್ಲಿ ‘ಡಿಟೆಕ್ಟಿವ್ ತೀಕ್ಷ್ಣ’ ಪ್ರೇಕ್ಷಕರ ಮನ ಗೆಲ್ಲುತ್ತಾಳೆಯೇ? ಬಾಕ್ಸ್ ಆಫೀಸ್‌ನಲ್ಲಿ ಯಾವ ಮಟ್ಟಿಗೆ ಸದ್ದು ಮಾಡಲಿದೆ ಎಂಬುದಕ್ಕೆ ಆಗಸ್ಟ್ 7ರಂದು ಉತ್ತರ ಸಿಗಲಿದೆ.