Sunday, August 2, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ  : ರೂ.20 ಲಕ್ಷ ಪರಿಹಾರಕ್ಕೆ ಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ದಿನಾಂಕ 01.08.2026ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ಅವರು ಸೂಚನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್.ಎನ್. ನರಗುಂದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೃತ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೆರವು ಮತ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ಅವರು ನಿರ್ದೇಶನ ನೀಡಿದರು.