Wednesday, October 28, 2026
ಜಿಲ್ಲೆರಾಜ್ಯಶಿವಮೊಗ್ಗಸುದ್ದಿ

ದೇವಸ್ಥಾನದ ಲಿಫ್ಟ್‌ನಲ್ಲಿ ಸಿಲುಕಿ ನಿವೃತ್ತ ಇಂಜಿನಿಯರ್ ಸಾವು – ಕಹಳೆ ನ್ಯೂಸ್

ಶಿವಮೊಗ್ಗ: ನಗರದ ದತ್ತಾತ್ರೇಯ ಸ್ವಾಮಿ ದೇವಸ್ಥಾನದ ಲಿಫ್ಟ್‌ನಲ್ಲಿ  ಸಿಲುಕಿ ಅಸ್ವಸ್ಥಗೊಂಡಿದ್ದ ನಿವೃತ್ತ ಇಂಜಿನಿಯರ್ ಸಾವನ್ನಪ್ಪಿದ್ದಾರೆ.

ಜಾಹೀರಾತು

ಕುಮಾರಸ್ವಾಮಿ (80) ಸಾವಿಗೀಡಾದ ನಿವೃತ್ತ ಇಂಜಿನಿಯರ್. ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್‌ನಲ್ಲಿ ಮೇಲೆ ತೆರಳಲು ಬಟನ್ ಒತ್ತಿ ಒಳಹೋದಾಗ, ಮೇಲಿಂದ ಬಂದ ಲಿಫ್ಟ್‌ನಲ್ಲಿ ಅವರು ಸಿಲಿಕಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗದೆ.