Saturday, August 8, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಹೋಟೆಲ್‌ಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; 31 ಲೀಟರ್ ಎಕ್ಸ್‌ಪೈರಿ ಹಾಲು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹೋಟೆಲ್‌ಗಳಲ್ಲಿ (Food Safety) ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಬಗ್ಗೆ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಫುಡ್ ಸೇಫ್ಟಿ ಇಲಾಖೆ (Bengaluru) ಪರಿಶೀಲನೆಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಹಿನ್ನೆಲೆ ಬೆಂಗಳೂರಿನ ಪ್ರಸಿದ್ಧ ಖಾಸಗಿ ಹೋಟೆಲ್‌ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31 ಲೀಟರ್ ಹಾಲು ಪತ್ತೆಯಾಗಿದೆ.

ಜಾಹೀರಾತು

ಅವಧಿ ಮೀರಿದ ಹಾಲನ್ನು ಹೋಟೆಲ್‌ನಲ್ಲಿ ಬಳಕೆ ಮಾಡಲಾಗುತ್ತಿತ್ತು ಎಂಬುದು ಅಧಿಕಾರಿಗಳ ಪರಿಶೀಲನೆಯಲ್ಲಿ ಪತ್ತೆಯಾಗಿದೆ. ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ನೀಡುವ ಆಹಾರದ ಗುಣಮಟ್ಟ ಹಾಗೂ ಬಳಸುವ ಕಚ್ಚಾ ವಸ್ತುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಹೋಟೆಲ್‌ಗಳ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ಮುಂದುವರಿಯಲಿದ್ದು, ನಿಯಮ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು