Saturday, August 8, 2026
ಜಿಲ್ಲೆಸುದ್ದಿ

ವರ್ಕ್ ಫ್ರಂ ಹೋಮ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ : ದಂಪತಿ ಅರೆಸ್ಟ್ – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ವರ್ಕ್ ಫ್ರಂ ಹೋಮ್  ಹೆಸರಿನಲ್ಲಿ ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಿರಣ್ ಮತ್ತು ಪತ್ನಿ ಆರತಿ ಬಂಧಿತ ಆರೋಪಿಗಳು. ಇಬ್ಬರೂ ಸೇರಿಕೊಂಡು ಕಾಳಿಕಾ ದೇವಿ ಎಂಟರ್ ಪ್ರೈಸಸ್ ಹೆಸರಲ್ಲಿ ಜನರಿಗೆ ಕೋಟಿ ಕೋಟಿ ವಂಚನೆ ಮಾಡಿದ್ದರು. ಆರೋಪಿಗಳು ದೇವನಹಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಜಾಹೀರಾತು

ಸಾವಿರಾರು ಜನರಿಗೆ ಮನೆಗೆ ಕೆಲಸ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದರು. ಇನ್‌ಸ್ಟಾಗ್ರಾಂನಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ಕೊಡುವುದಾಗಿ ರೀಲ್ಸ್ ಮಾಡಿದ್ದರು. ಜನರಿಂದ ಲಕ್ಷ ಲಕ್ಷ ಹಣ ಡೆಪಾಸಿಟ್ ಮಾಡಿಸಿಕೊಂಡು ವಂಚಿಸಿ ತಲೆಮರೆಸಿಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು