Sunday, August 9, 2026
ಉಡುಪಿಜಿಲ್ಲೆಸುದ್ದಿ

ಕಾಂಗ್ರೆಸ್‌ ಮುಖಂಡ, ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಕೇಸ್;‌ ಆರೋಪಿ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಉಡುಪಿ: ಕಾಂಗ್ರೆಸ್‌ ಮುಖಂಡ ಹಾಗೂ ಉದ್ಯಮಿ ಡೇವಿಡ್‌ ಡಿಸೋಜಾ  ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

ಜಾಹೀರಾತು

ಆರೋಪಿ ಯುಪಿ ಮೂಲದ ಶೂಟರ್‌ ರಾಜು ಬಲಗಾಲಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡೇಟು ನೀಡಿದ್ದಾರೆ. ಉಡುಪಿ (Udupi) ಜಿಲ್ಲೆಯ ಗಡಿಭಾಗದಲ್ಲಿರುವ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬೈಂದೂರಿನ ಒತ್ತಿನಣೆಯಲ್ಲಿ ಪತ್ತೆ ಮಾಡಲಾಗಿದೆ. ಮಾಹಿತಿ ಅರಿತು ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದರು.

ಆತ್ಮರಕ್ಷಣೆಗಾಗಿ ಆರೋಪಿ ಶೂಟರ್ ರಾಜು ಮೇಲೆ ಪೊಲೀಸರು ಫೈಯರ್ ಮಾಡಿದ್ದಾರೆ. ಈ ವೇಳೆ ಎಸ್‌ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಿಂದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಗುಂಡಿನಿಂದ ಗಾಯಗೊಂಡ ಆರೋಪಿ ರಾಜುನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ. ಎಸ್ಕೇಪ್‌ ಆದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.