
ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀದೇವಿ ವಿದ್ಯಾ ಕೇಂದ್ರ, ಪುಣಚ ಇಲ್ಲಿ ನಡೆಸಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಶಸ್ತಿ ಪಡೆದಿರುತ್ತಾರೆ. 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಹವನ್ ಎ.ವೈ. (9ನೇ ತರಗತಿ) ಮತ್ತು ಲೋಹಿತ್ ಪಿ. (9ನೇ ತರಗತಿ) ಇವರು ಪ್ರಥಮ ಸ್ಥಾನವನ್ನು ಪಡೆದು ಮುಂದೆ ನಡೆಯುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ತನ್ವಿ (6ನೇ ತರಗತಿ) ಇವಳು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಸಂಸ್ಥೆಯ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತ್ತಡ್ಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಸತೀಶ್ಚಂದ್ರ ಕೆ.ಎಸ್. ಇವರು ತರಬೇತಿ ನೀಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದಿಸಿರುತ್ತಾರೆ.











