Monday, August 10, 2026
ಸುದ್ದಿ

ಕರ್ನಾಟಕದಿಂದ 4.5 TMC ಕಾವೇರಿ ನೀರು ಬಿಡುಗಡೆಗೆ ಆಗ್ರಹ : ಆ.13ರಂದು ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ- ಕಹಳೆ ನ್ಯೂಸ್

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ  ಆದೇಶದಂತೆ ತಕ್ಷಣವೇ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ (ಆ.13) ನಡೆಸಲು ಸುಪ್ರೀಂ ಕೋರ್ಟ್  ಸಮ್ಮತಿಸಿದೆ.

ಜಾಹೀರಾತು

ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುನ್ನೆಲೆಗೆ ತಂದು ತುರ್ತು ವಿಚಾರಣೆಗೆ ಮನವಿ ಮಾಡಿದರು. ಈ ಮನವಿಯನ್ನು ಆಲಿಸಿದ ನ್ಯಾಯಪೀಠವು ಗುರುವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜುಲೈ 30 ರಂದು ನಡೆದ ಸಭೆಯಲ್ಲಿ, ಕರ್ನಾಟಕದ ಕಬಿನಿ ಹಾಗೂ ಕೃಷ್ಣರಾಜ ಸಾಗರ  ಜಲಾಶಯಗಳಿಂದ ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಈ ನಿರ್ಧಾರವನ್ನು ಜಾರಿ ಮಾಡುವಂತೆ ತಮಿಳುನಾಡು ಸರ್ಕಾರವು ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳಿಗೆ ಒಟ್ಟು 4.536 ಟಿಎಂಸಿ ನೀರನ್ನು ಆಗಸ್ಟ್ 12 ರೊಳಗೆ ಬಿಡುಗಡೆ ಮಾಡಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ತಮಿಳುನಾಡು ಕೋರಿದೆ.

ರಾಜ್ಯದ ವಿರೋಧ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ  ಕೂಡ ಇದೇ ರೀತಿಯ ಪ್ರತ್ಯೇಕ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.