Monday, August 10, 2026
ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ IQAC ಸಹಯೋಗದಲ್ಲಿ ನಡೆದ  We the people and Indian Constitution ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ  IQAC ಸಹಯೋಗದಲ್ಲಿ We the people and Indian Constitution ಎಂಬ
ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೇಘಾಲಯದ ಸರಸ್ವತಿ ಶಿಕ್ಷಣ ಸಂಸ್ಥೆಗಳ
ಸAಸ್ಥಾಪಕರಾದ, ದಕ್ಷಿಣ ಕನ್ನಡ ಮೂಲದ ಡಾ. ಪಿ ಅನಂತಕೃಷ್ಣ ಭಟ್ ಅವರು ಭಾರತೀಯ ಸಂವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಡಾ. ಪಿ. ಅನಂತಕೃಷ್ಣ ಭಟ್ ಅವರು ಬರೆದ  ಸ್ವಾತಂತ್ರ‍್ಯೋತ್ತರ ಅಮೃತ ವರ್ಷ- ಭಾರತ ಸಂವಿಧಾನ ಎಂಬ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ, ಉಪಪ್ರಾಂಶುಪಾಲ ಯತಿರಾಜ್ ಪೆರಾಜೆ, ರಾಜ್ಯಶಾಸ್ತ್ರ ಉಪನ್ಯಾಸಕಿ ಕು. ನಾಗಲತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿಯರಾದ ನಾಗಲತಾ ಸ್ವಾಗತಿಸಿ, ಸುನಿತಾ ವಂದಿಸಿ, ಬಿಎ ವಿದ್ಯಾರ್ಥಿನಿ ಕು. ಅಕ್ಷತ ಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು