
ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 2026-27 ಸಾಲಿನ ಮಾತೃಭಾರತಿ ಸಭೆಯನ್ನು ಮಧುಕರ ಸಭಾಭವನದಲ್ಲಿ ಆಯೋಜಿಸಲಾಯಿತು. ಶ್ರೀರಾಮ ವಿದ್ಯಾ ಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಯುತ ಕೃಷ್ಣಪ್ರಸಾದ್ ಕಾಯರಕಟ್ಟೆ ಪ್ರಾಸ್ತಾವಿಕ ನುಡಿಗಳ ಮೂಲಕ ಸಭೆಯ ಉದ್ದೇಶ ಹಾಗೂ ಮಹತ್ವವನ್ನು ತಿಳಿಸಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು ಹಾಗೂ ಹಿರಿಯರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರು ಈ ಶೈಕ್ಷಣಿಕ ವರ್ಷದ ಮಾತೃಭಾರತಿಯ ಪದಾಧಿಕಾರಿಗಳ ಪಟ್ಟಿಯನ್ನು ಘೋಷಣೆ ಮಾಡಿ ಮಾತೃ ಭಾರತಿಯ ಸದಸ್ಯರ ಜವಾಬ್ದಾರಿಗಳ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ, ಸಹಕಾರ್ಯ ನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರವಿರಾಜ್ ಕಣಂತೂರು, ಶ್ರೀರಾಮ ವಿದ್ಯಾ ಕೇಂದ್ರದ ಕೋಶಾಧಿಕಾರಿಯಾದ ಶ್ರೀ ಸತೀಶ್ ಶಿವಗಿರಿ ಹಾಗೂ ಶ್ರೀರಾಮ
ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಇಂಗ್ಲೀಷ್ ಉಪನ್ಯಾಸಕಿ ಶ್ರೀಮತಿ ರೋಹಿಣಿ ಕಾರ್ಯಕ್ರಮವನ್ನು ನಿರ್ವಹಿಸಿದರು.











