
ಶಿಮ್ಲಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಜಾರಿಗೆ ಬರುವಂತೆ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ 60 ಪೈಸೆ ಹೆಚ್ಚಳವಾಗಿದೆ.
ಹಣದುಬ್ಬರ ಅಥವಾ ಕಚ್ಚಾ ತೈಲದ ಬೆಲೆ ಏರಿಕೆಯಿಂದ ಈ ದರ ಏರುತ್ತಿಲ್ಲ. ಬದಲಿಗೆ ವಿಧವಾ ಮತ್ತು ಅನಾಥ ಕಲ್ಯಾಣ ಸೆಸ್ ಹೆಸರಿನಲ್ಲಿ 60 ಪೈಸೆ ಕರ ಸಂಗ್ರಹಿಸಲು ಸುಖ್ವಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ಮುಂದಾಗಿದೆ.
ರಾಜ್ಯ ಮೌಲ್ಯವರ್ಧಿತ ತೆರಿಗೆ (VAT) ಕಾಯ್ದೆಯಡಿ ರಾಜ್ಯ ತೆರಿಗೆ ಮತ್ತು ಅಬಕಾರಿ ಇಲಾಖೆಯು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದೆ. ತೈಲ ಸಂಸ್ಥೆಗಳು ಡೀಲರ್‌ಗಳಿಗೆ ತೈಲ ಮಾರಾಟ ಮಾಡುವ ಆರಂಭಿಕ ಹಂತದಲ್ಲೇ ಈ ಸೆಸ್ ಅನ್ವಯವಾಗಲಿದೆ. ಸದ್ಯಕ್ಕೆ 60 ಪೈಸೆ ಹೆಚ್ಚಳ ಮಾಡಲಾಗಿದ್ದರೂ, ಶಾಸನಬದ್ಧವಾಗಿ ಲೀಟರ್‌ಗೆ ಗರಿಷ್ಠ 5 ರೂಪಾಯಿವರೆಗೆ ಸೆಸ್ విಧಿಸಲು ಸರ್ಕಾರಕ್ಕೆ ಅವಕಾಶವಿದೆ.











