Recent Posts

Thursday, August 13, 2026
ಸುದ್ದಿ

ಉಗ್ರಾಯುಧಮ್ ಚಿತ್ರೀಕರಣದಲ್ಲಿ ಶ್ರೀಮುರಳಿ ಬ್ಯುಸಿ- ಕಹಳೆ ನ್ಯೂಸ್

ರೋರಿಂಗ್ ಸ್ಟಾರ್ ಶ್ರೀಮುರಳಿ ಸದ್ಯ ‘ಉಗ್ರಾಯುಧಮ್’ ಸಿನಿಮಾದ ಚಿತ್ರೀಕರಣದಲ್ಲಿ  ಬ್ಯುಸಿಯಾಗಿದ್ದಾರೆ. 700 ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯನ್ನು ಹೊಂದಿರುವ ಈ ಪಿರಿಯಾಡಿಕ್ ಡ್ರಾಮಾ ಸಿನಿಮಾ ಭರ್ಜರಿ ತಾರಾಬಳಗ ಮತ್ತು ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆ.

ಜಾಹೀರಾತು

ನಿದ್ರಾದೇವಿ ನೆಕ್ಸ್ಟ್ ಡೋರ್’ ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಬಂದ ಜಯರಾಮ್ ದೇವಸಮುದ್ರ, ತಮ್ಮ ಸುರಮ್ ಮೂವೀಸ್ ಬ್ಯಾನರ್‌ನಲ್ಲಿ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ ಅವರು ನಿರ್ಮಿಸಿರುವ ‘ಎಲ್‌ಎಸ್‌ಡಿ’ ಹಾಗೂ ‘ನೀ ನಂಗೆ ಅಲ್ಲವಾ’ ಚಿತ್ರಗಳು ಕೂಡ ರಿಲೀಸ್‌ಗೆ ಸಿದ್ಧವಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

‘ಉಗ್ರಾಯುಧಮ್’ ಸಿನಿಮಾವನ್ನು ಪುನೀತ್ ರುದ್ರನಾಗ್ ನಿರ್ದೇಶಿಸುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಸಿನಿಮಾದ ಕಥೆ ಮತ್ತು ಚಿತ್ರಕಥೆಯನ್ನೂ ಅವರೇ ಬರೆದಿದ್ದು, ಮಂಜು ಅಥರ್ವ ಕಥೆ ಹಾಗೂ ಚಿತ್ರಕಥೆ ರಚನೆಯಲ್ಲಿ ನಿರ್ದೇಶಕರಿಗೆ ಸಾಥ್ ನೀಡಿದ್ದಾರೆ.

ಸದ್ಯ ಬೆಂಗಳೂರಿನ ರಾಕ್‌ಲೈನ್ ಸ್ಟುಡಿಯೋದಲ್ಲಿ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಕಲಾ ನಿರ್ದೇಶಕ ಅಮರ್ ಅದ್ದೂರಿ ಸೆಟ್ ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಶೂಟಿಂಗ್‌ನಲ್ಲಿ ಶ್ರೀಮುರಳಿ ಕೂಡ ಭಾಗವಹಿಸುತ್ತಿದ್ದು, 400ಕ್ಕೂ ಹೆಚ್ಚು ಸಹ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ಇದು ಚಾರಿತ್ರಿಕ ಹಿನ್ನೆಲೆಯ ಸಿನಿಮಾ ಆಗಿರುವುದರಿಂದ ಹೆಚ್ಚಿನ ಚಿತ್ರೀಕರಣ ಹೊರಾಂಗಣದಲ್ಲೇ ನಡೆಯಲಿದೆ. ಸದ್ಯ ಮಳೆಗಾಲ ಇರುವ ಕಾರಣ ಬೆಂಗಳೂರಿನಲ್ಲಿ ಒಳಾಂಗಣದ ದೃಶ್ಯಗಳನ್ನು ಚಿತ್ರೀಕರಿಸಲಾಗುತ್ತಿದೆ. ಮಳೆಗಾಲ ಮುಗಿದ ಬಳಿಕ ಚಿತ್ರತಂಡ ತೀರ್ಥಹಳ್ಳಿಗೆ ತೆರಳಿ ಶೂಟಿಂಗ್ ಮುಂದುವರಿಸಲಿದೆ.

ಈ ಸಿನಿಮಾದಲ್ಲಿ ಶ್ರೀಮುರಳಿ ಈ ಹಿಂದೆ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ‘ಉಗ್ರಾಯುಧಮ್’ ಸಿನಿಮಾ ಅವರ ಅಭಿಮಾನಿಗಳಲ್ಲಿ ಈಗಾಗಲೇ ಕುತೂಹಲ ಮೂಡಿಸಿದೆ.

ಸಂಕೇತ್ ಸಿನಿಮಾಗೆ ಛಾಯಾಗ್ರಹಣ ಮಾಡುತ್ತಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ವಿವರಗಳನ್ನು ಚಿತ್ರತಂಡ ಸದ್ಯದಲ್ಲೇ ಬಹಿರಂಗಪಡಿಸಲಿದೆ.