ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬಂಟ್ವಾಳ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2026” ಕಾರ್ಯಕ್ರಮ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಬಂಟ್ವಾಳ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2026” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ನಾಗೇಶ್ ಕಲ್ಲಡ್ಕ ಮಾತನಾಡಿ, ವಿದ್ಯಾರ್ಥಿಗಳು ಹೊಸ ಚಿಂತನೆಗಳನ್ನು ಬೆಳೆಸುವುದರ ಜೊತೆಗೆ ದೇಶದ ಅಭಿವೃದ್ಧಿಯ ಬಗ್ಗೆ ಚಿಂತಿಸುವ ಮನೋಭಾವವನ್ನು ಬೆಳೆಸಿಕೊಳ್ಳುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅತಿಥಿ ಹಾಗೂ ರಾಷ್ಟ್ರೀಯ ಪ್ರಶಸ್ತಿ ವಿಜೇತೆ, ರಂಗಭೂಮಿ ಮತ್ತು ಚಲನಚಿತ್ರ ನಟಿ ಶ್ರೀಮತಿ ರೂಪಶ್ರೀ ವರ್ಕಾಡಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ದೊರೆಯುವ
ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು.
ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಾಗ ನಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ
ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಲಕ್ಷ್ಮಿ ರಘುರಾಜ್,ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯ ಸದಸ್ಯರಾದ ಶ್ರೀ ಕಿಶನ್ ಮೊಡಪ್ಪಾಡಿ, ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ , ಪ್ರಾಂಶುಪಾಲರಾದ ಶ್ರೀ ವಸಂತ್ ಬಲ್ಲಾಳ್ ಉಪಸ್ಥಿತರಿದ್ದರು. ಅಟಲ್ ಟಿಂಕರಿಂಗ್ ಲ್ಯಾಬ್ ಫೆಸ್ಟ್ – ಸವಿಸ್ಕಾರ್ 2026” ಇದರ ಸಂಯೋಜಕರಾದ ಶ್ರೀಮತಿ ನಂದ ವಿಜೇತರ ಪಟ್ಟಿಯನ್ನು ವಾಚಿಸಿದರು.ಸ್ಪರ್ಧೆಯಲ್ಲಿ ಬಂಟ್ವಾಳ ರಘುರಾಮ ಮುಕುಂದ ಪ್ರಭು ಪಬ್ಲಿಕ್ ಸ್ಕೂಲ್ ಸಮಗ್ರ ದ್ವಿತೀಯ ಸ್ಥಾನವನ್ನು ಹಾಗೂ ಬಾಲ ವಿಕಾಸ ಇಂಗ್ಲಿಷ್ ಮೀಡಿಯಂ ಶಾಲೆ ಮಾಣಿ ಸಮಗ್ರ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಕಾರ್ಯಕ್ರಮವನ್ನು ಕುಮಾರಿ ಪ್ರಿಯ ನಿರೂಪಿಸಿ ಕುಮಾರಿ ಸಂಧ್ಯಾ ಕಾಮತ್ ವಂದನಾರ್ಪಣೆಗೈದರು











