
ಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ.
ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಇಂದು ಬೆಳಗಿನ ಜಾವ 5:30ಕ್ಕೆ ಕೆ.ಹೆಚ್.ಬಿ. ನಗರದಲ್ಲಿರುವ ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.











