Thursday, August 13, 2026
ಮಂಗಳೂರು

ರಾಜ್ಯ ಸರಕಾರದ ವಿರುದ್ಧ ಹೋರಾಟ: ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ-ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರವು ನಿರಂತರವಾಗಿ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ತೊಡಗಿದೆ. ಹಾಗಾಗಿ ವಿಧಾನಮಂಡಲ ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಲಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಜಾಹೀರಾತು

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋ.ರೂ.ಗೂ ಹೆಚ್ಚಿನ ಹಣ ದುರ್ಬಳಕೆ ಹಾಗೂ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರಕಾರದ ಗ್ಯಾರಂಜಿ ಯೋನಜನೆ ವಿಫಲವಾಗಿದೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿಯೋಜನೆಗಳ ಮರುಪರಿಶೀಲನೆ ಹೆಸರಿನಲ್ಲಿ ಕಡಿತ ಮಾಡಲು ಸರಕಾರ ಹೊರಟಿದೆ. ಸುಮಾರು 18.5 ಲಕ್ಷಕ್ಕೂ ಹೆಚ್ಚು ಬಡವರ ಪಿಂಚಣಿ ಯೋಜನೆಯನ್ನು ಕಡಿತಗೊಳಿಸಿ ಜನರಿಗೆ ದ್ರೋಹ ಎಸಗಿದೆ ಎಂದು ಸತೀಶ್ ಕುಂಪಲ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಕಲ್ಪನೆ ಮತ್ತು ಪಕ್ಷದ ನಿರ್ದೇಶನದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ತಿರಂಗಾ ಯಾತ್ರೆಯನ್ನು ಸಂಘಟಿಸಲಾಗುತ್ತಿದೆ. ಆ.13ರಿಂದ 15ರವರೆಗೆ ಜಿಲ್ಲೆಯ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮುಖಂಡರಾದ ಸುನಿಲ್ ಆಳ್ವ, ವಿಕಾಸ್ ಪುತ್ತೂರು, ಸಂಜೀವ ಪ್ರಭು, ಜಗದೀಶ್ ಆಳ್ವ, ವಸಂತ್ ಪೂಜಾರಿ, ಶಿವಕುಮಾ‌ರ್, ಕದ್ರಿ ಮನೋಹ‌ರ್ ಶೆಟ್ಟಿ ಉಪಸ್ಥಿತರಿದ್ದರು.