ಆ.16ರಂದು ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಎರಡನೇ ವಿವಾಹ- ಕಹಳೆ ನ್ಯೂಸ್

ಮಡಿಕೇರಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ನಡೆಯಲಿದೆ.
ಆಗಸ್ಟ್ 15ರಿಂದ 20ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಟಿ. ಜಾನ್ ಕುಟುಂಬಸ್ಥರ ಒಡೆತನದ ಕೂರ್ಗ್ ವೈಲ್ಡರ್‌ನೆಟ್ ರೆಸಾರ್ಟ್‌ನಲ್ಲಿ ಮದುವೆ ಸಂಭ್ರಮ ನಡೆಯಲಿದೆ.
ಆಗಸ್ಟ್ 16ರಂದು ಮಧ್ಯಾಹ್ನ 12 ಗಂಟೆಗೆ ನಿಕಾಹ್ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇರಳ ಮುಖ್ಯಮಂತ್ರಿ ಸತೀಶನ್, ನಟರಾದ ಸುದೀಪ್, ಯಶ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.











