Saturday, August 15, 2026
ಸುದ್ದಿ

80ನೇ ಸ್ವಾತಂತ್ರ‍್ಯ ದಿನಾಚರಣೆ : ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆ ಶಿವಕುಮಾರ್‌ -ಕಹಳೆ ನ್ಯೂಸ್

ಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಜಾಹೀರಾತು

ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಡಿಕೆ ಶಿವಕುಮಾರ್ ತೆರೆದ ಜೀಪಿನಲ್ಲಿ ಗೌರವ ವಂದನೆ ಸ್ವೀಕರಿಸಿದರು.‌ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ಇನ್ನೂ ಸಿಎಂ ಭಾಷಣದ ಬಳಿಕ ಮಾಣೆಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈಗಾಗಲೇ ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ 13ನೇ ಭಾರಿ ಧ್ವಜಾರೋಹಣ ನೆರವೇರಿಸಿ, ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.