Saturday, August 15, 2026
ಸುದ್ದಿ

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು : 80ಕ್ಕೂ ಅಧಿಕ ಗೇಟ್‌ಗಳ ಮೂಲಕ ನೀರು ಬಿಡುಗಡೆ-ಕಹಳೆ ನ್ಯೂಸ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ.

ಜಾಹೀರಾತು

ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ತಗ್ಗಿದ ಹಿನ್ನೆಲೆ ನೀರಿನ ಪ್ರಮಾಣ ಸರಿದೂಗಿಸಲು ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಸರ್ಕಾರದ ಆದೇಶ ಹಾಗೂ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಳೆದ ರಾತ್ರಿಯಿಂದಲೇ ನೀರು ಬಿಡುಗಡೆ ಕಾರ್ಯ ಆರಂಭಿಸಿದ್ದಾರೆ.
ಜಲಾಶಯದ 80ಕ್ಕೂ ಹೆಚ್ಚು ಕ್ರಸ್ಟ್‌ ಗೇಟ್‌ಗಳ ಮೂಲಕ ಸುಮಾರು 3,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳ ಮೂಲಗಳು ಮಾಹಿತಿ ನೀಡಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು