
ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು.
ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ಐ.ಕ್ಯೂ.ಎ.ಸಿ ಸಂಯೋಜಕಿ ಡಾ. ಮಮತಾ ಕೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ, ನಿವೃತ್ತ ಪ್ರಾಂಶುಪಾಲರಾದ ಪ್ರೊ. ಜವರೇ ಗೌಡ, ಕಾಲೇಜಿನ ಹಿರಿಯ ವಿದ್ಯಾರ್ಥಿಗಳು, ವಿವಿಧ ಘಟಕಗಳ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.











