
ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾನಗರದ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಧ್ವಜಾರೋಹಣವನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ನೆರವೇರಿಸಿ ಭಾರತೀಯರು ಸ್ವಾತಂತ್ರ್ಯ ಪಡೆಯಲು ಮಾಡಿದ ತ್ಯಾಗ, ಬಲಿದಾನ ಹಾಗೂ ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಅತ್ಯಂತ ಅದ್ಭುತವಾಗಿ ವಿವರಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಮಣ್ಯ ಭಟ್, ಕೋಶಾಧಿಕಾರಿ ಶ್ರೀ ಲಿಂಗಪ್ಪ.ಜೆ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷೇತರ ವೃಂದ, ಪೆÇೀಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಶ್ರೀ ಮಾಧವ ಕೋಲ್ಪೆ ಸ್ವಾಗತಿಸಿ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ.ಎಸ್ ವಂದಿಸಿದರು.











