Saturday, August 15, 2026
ಸುದ್ದಿ

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ 80ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ-ಕಹಳೆ ನ್ಯೂಸ್

ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕಡಬ ಇಲ್ಲಿ 80ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿ0ದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೈನಿಕರಾದ ಶ್ರೀ ಜಯಂತ ಪಂಜ ನೆರವೇರಿಸಿದರು. ಧ್ವಜರೋಹಣದ ಬಳಿಕ ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎಂ.ಬಿ. ಅಶೋಕ್ ಕುಮಾರ್ ಮೂಲೆಮಜಲು ಇವರು ಸ್ವಾತಂತ್ರ‍್ಯದ ಸಾರ್ಥಕತೆಯಿರುವುದು ಮೌಲ್ಯಯುತ ಶಿಕ್ಷಣವನ್ನು ಪಡೆದಾಗ ಮಾತ್ರ ಮತ್ತು ವಿದ್ಯಾರ್ಥಿಗಳು ಉತ್ತಮ ಶಿಸ್ತು, ನಡತೆಯ ಜೊತೆಗೆ ಒಳ್ಳೆಯ ಶಿಕ್ಷಣವನ್ನು ಪಡೆದು ಭಾರತಮಾತೆಯ ಸೇವೆಯನ್ನು ಮಾಡಬೇಕು ಹಾಗೂ ಈ ರಾಷ್ಟçಕ್ಕಾಗಿ ಒಬ್ಬ ಒಳ್ಳೆಯ ವ್ಯಕ್ತಿಯಾಗಬೇಕೆಂದು ಆಶಯ ವ್ಯಕ್ತಪಡಿಸಿದರು. ಧ್ವಜಾರೋಹಣಗೈದ ಶ್ರೀ ಜಯಂತ ಪಂಜ ಇವರು ಮಾತನಾಡಿ ಪ್ರತಿಯೊಬ್ಬರೂ ದೇಶಸೇವೆಯನ್ನು ಮಾಡುವ ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ, ಮುಖ್ಯ ಶಿಕ್ಷಕ ಶ್ರೀ ವಸಂತ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕೃತಿಕ್, 10ನೇ ತರಗತಿ ಸ್ವಾಗತಿಸಿ, ಕು| ಎನ್.ಸಿ. ಜಸ್ವಿತಾ, 10ನೇ ತರಗತಿ ವಂದಿಸಿದರು. ಭವಿಷ್ಯ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು