Saturday, August 15, 2026
ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ- ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವು ಕಾಲೇಜಿನ ಆಜಾದ್ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಸ್ವಾತಂತ್ರ್ಯ ಹೋರಾಟಗಾರರ, ಕೆಚ್ಚೆದೆಯ ಸೈನಿಕರ ಧೈರ್ಯ, ಶೌರ್ಯ ಪರಾಕ್ರಮ, ಬಲಿದಾನಗಳನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಗಳಾಗಿ, ಸಮಾಜಕ್ಕಾಗಿ, ರಾಷ್ಟ್ರಕ್ಕಾಗಿ ಜೀವಿಸಿ ಎನ್ನುತ್ತಾ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯ ಉಜ್ವಲ್ ಗ್ರೂಪ್ ಆಫ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಅಜಯ್ ಪುರುμÉೂೀತ್ತಮ ಶೆಟ್ಟಿ ಇವರು ದೀಪ ಪ್ರಜ್ವಲನ ಹಾಗೂ ಟಿವಿ ಪರದೆಯ ಅನಾವರಣದ ಮೂಲಕ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ಶಿಸ್ತು, ಕರ್ತವ್ಯಪ್ರಜ್ಞೆ, ರಾಷ್ಟ್ರಪ್ರಜ್ಞೆ, ಮತ್ತು ದೇಶಭಕ್ತಿಯನ್ನು ಮೈಗೂಡಿಸಿಕೊಂಡರೆ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಗಲು ಸಾಧ್ಯ., ಭಾರತವು ಜಗದ್ಗುರುವಾಗಲು ಸಾಧ್ಯ ಎಂದು ವಿಕಸಿತ ಭಾರತದ ಕನಸನ್ನು ನನಸಾಗಿಸುವಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ, ಕಾರ್ಯದರ್ಶಿ, ಸಹಕಾರ್ಯದರ್ಶಿ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಹಾಗೂ ತರಗತಿ ಪ್ರತಿನಿಧಿಗಳಿಗೆ ಶ್ರೀರಾಮ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಪ್ರಮಾಣ ವಚನ ಬೋಧಿಸಿದರು. ಮತದಾನ ಸಾಕ್ಷರತಾ ಘಟಕದ ನಿರ್ದೇಶಕಿ ಶ್ರೀಮತಿ ಆಶಾಲತಾ ಚುನಾವಣಾ ವರದಿ ವಾಚನಗೈದರು. ಪ್ರಗತಿಪರ ಕೃಷಿಕರು, ಶ್ರೀರಾಮ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ, ಉಪ ಪ್ರಾಂಶುಪಾಲೆ ಹಾಗೂ ವಿದ್ಯಾರ್ಥಿ ಸಂಘದ ನಿರ್ದೇಶಕಿ ಶ್ರೀಮತಿ ಸುಕನ್ಯಾ ಹಾಗೂ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲ ಯತಿರಾಜ್ ಪೆರಾಜೆ ಗಣ್ಯರನ್ನು ಸ್ವಾಗತಿಸಿ, ಅಂತಿಮ ಬಿಸಿಎ ವಿದ್ಯಾರ್ಥಿನಿ ಕು. ದಿಲೀಕ್ಷಾ ವಂದಿಸಿ, ಬಿಎ ವಿದ್ಯಾರ್ಥಿನಿ ಕು. ಅಕ್ಷತ ಲಕ್ಷ್ಮೀ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಲಾಯಿತು.