Sunday, August 16, 2026
ಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವನ್ನು ಆಚರಣೆ -ಕಹಳೆ ನ್ಯೂಸ್

ಬಡಗನ್ನೂರುಃ: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಅ. 15 ರಂದು ನಡೆಯಿತು. ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಮಾನಸಿಕ ಮತ್ತು ದೈಹಿಕವಾಗಿ ಸ್ವತಂತ್ರರಾಗುವ ಮೂಲಕ ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತೆ ಕರೆ ನೀಡಿ 80 ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಸಲ್ಲಿಸಿದರು. ನಿವೃತ್ತ ಯೋಧ ಸುಂದರ ಪೂಜಾರಿ ಪಳಂಬೆ ವಿದ್ಯಾರ್ಥಿಗಳ ಪಥ ಸಂಚಲನದ ಗೌರವಂದನೆ ಸ್ವೀಕರಿಸಿ ತನ್ನ ಸೇವಾವಧಿಯ ಅನುಭವಗಳನ್ನು ಹಂಚಿಕೊಂಡರು..

ಜಾಹೀರಾತು

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ :
ಈ ಸಂದರ್ಭದಲ್ಲಿ 14ರ ವಯೋಮಾನ ಮತ್ತು 17ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾದ ಎಂಟನೇ ತರಗತಿಯ ಅದ್ವಿತ್ ಶೆಟ್ಟಿ, ಪ್ರಖ್ಯಾತ್, ಆದಿ, ಕೆ ಎ., ಸೃಜನ್ ಹಾಗೂ ಹತ್ತನೇ ತರಗತಿಯ ಸಾಥ್ವಿ ಹಾಗೂ ಅವರ ಪೋಷಕರನ್ನು ಅಭಿನಂದಿಸಲಾಯಿತು. 14ರ ವಯೋಮಾನದಲ್ಲಿ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಕುಮಾರಿ ಹರ್ಷಿಕಾ 8ನೇ ತರಗತಿ ಇವರನ್ನು ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿರ್ದೇಶಕ ಗಣರಾಜ ಕುಂಬ್ಳೆ, ಪ್ರೌಢಶಾಲಾ ಎಸ್.ಡಿ.ಯಂ. ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಪ್ರಾಥಮಿಕ ಶಾಲೆಯ ಎಸ್.ಡಿ.ಯಂ. ಸಿ ಅಧ್ಯಕ್ಷ ಕೇಶವ ಪ್ರಸಾದ್ ನೀಲಗಿರಿ, ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಗುರು ಸುಮನಾ ಬಿ., ಪ್ರಾಥಮಿಕ ಶಾಲಾ ಮುಖ್ಯಗುರು ರಾಜಗೋಪಾಲ್ ಎನ್., ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಗುರು ಪುಷ್ಪಾವತಿ ಡಿ., ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ ಎನ್. ವಂದಿಸಿದರು . ಶಿಕ್ಷಕಿ ಸ್ವರ್ಣಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು. ಕಾರ್ಯಕ್ರಮ ಕೊನೆಗೆ
ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲಾಯಿತು..