
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿರುವ ಹೋಟೆಲ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ದೇವಾಲಯ ಪಟ್ಟಣವಾದ ತಾರಾಪೀಠದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಮುಂಜಾನೆ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಗ್ನಿಶಾಮಕ ಇಲಾಖೆ ಅಂದಾಜಿಸಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.










