Recent Posts

Monday, August 17, 2026
ರಾಜ್ಯಸುದ್ದಿ

ಮದುವೆಯಾಗುವಂತೆ ಒತ್ತಾಯ : ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ – ಕಹಳೆ ನ್ಯೂಸ್

ಹೈದರಾಬಾದ್: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರೇಯಸಿಯನ್ನು  21 ವರ್ಷದ ಯುವಕನೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬಳಿಕ ಆಕೆಯ ಮೃತದೇಹವನ್ನು ಗೋಣಿ ಚೀಲದಲ್ಲಿ ಬಚ್ಚಿಟ್ಟು ಪರಾರಿಯಾಗಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
ಮೃತ ಯುವತಿಯನ್ನು ಬಿಹಾರ ಮೂಲದ ರೆಹಾನಾ ಎಂದು ಗುರುತಿಸಲಾಗಿದೆ. ರೆಹಾನಾ ಹೈದರಾಬಾದ್‌ನ ಬ್ಯಾಂಕ್ವೆಟ್ ಹಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಿಹಾರ ಮೂಲದವರೇ ಆಗಿರುವ 21 ವರ್ಷದ ಅಹ್ಮದ್ ಸಲಾಂ ಎಂಬಾತನೊಂದಿಗೆ ರೆಹಾನಾ ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು

ಮದುವೆ ವಿಚಾರಕ್ಕೆ ಜಗಳ:
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ರೆಹಾನಾ ಮತ್ತು ಸಲಾಂ ನಡುವೆ ಸಂಬಂಧದ ವಿಚಾರವಾಗಿ ಆಗಾಗ್ಗೆ ಮನಸ್ತಾಪ ಉಂಟಾಗುತ್ತಿತ್ತು. ರೆಹಾನಾ ಮತ್ತೊಬ್ಬ ವ್ಯಕ್ತಿಯೊಂದಿಗೆ ಆತ್ಮೀಯವಾಗಿದ್ದರೆಂಬ ವಿಚಾರವೂ ಇಬ್ಬರ ನಡುವಿನ ಜಗಳಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ನಡುವೆ ರೆಹಾನಾ ತನ್ನನ್ನು ಮದುವೆಯಾಗುವಂತೆ ಸಲಾಂ ಮೇಲೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾದ ತೀವ್ರಗೊಂಡ ಬಳಿಕ ಸಲಾಂ ರೆಹಾನಾ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಬಾಡಿಗೆ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ರೆಹಾನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹತ್ಯೆಯ ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ ಆಕೆಯ ಮೃತದೇಹವನ್ನು ಗೋಣಿ ಚೀಲದೊಳಗೆ ಬಚ್ಚಿಟ್ಟು ನಂತರ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಬಂದ ತಕ್ಷಣ ಸಬ್ ಇನ್‌ಸ್ಪೆಕ್ಟರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಮನೆಯ ಬೆಡ್‌ರೂಮ್‌ನಲ್ಲಿ ಗೋಣಿ ಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಎಸಿಪಿ ಆದಿಬಟ್ಲ ಪ್ರದೀಪ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಬೆಳಗ್ಗೆ ಸುಮಾರು 5 ಗಂಟೆಗೆ 100ಕ್ಕೆ ಕರೆ ಬಂದಿತ್ತು. ಕೂಡಲೇ ಸಬ್ ಇನ್‌ಸ್ಪೆಕ್ಟರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಗೋಣಿ ಚೀಲದೊಳಗೆ ರಕ್ತಸಿಕ್ತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆಯ ಬಳಿಕ ಅಹ್ಮದ್ ಸಲಾಂ ತಲೆಮರೆಸಿಕೊಂಡಿದ್ದಾನೆ. ಫಂಕ್ಷನ್ ಹಾಲ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಸಲಾಂನನ್ನು ಪತ್ತೆಹಚ್ಚಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಮೃತ ಯುವತಿಯ ಕುಟುಂಬಸ್ಥರಿಂದಲೂ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ರೆಹಾನಾ ಮತ್ತು ಆರೋಪಿ ನಡುವಿನ ಸಂಬಂಧದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಹತ್ಯೆಗೆ ನಿಖರವಾಗಿ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

ಈ ಪ್ರಕರಣದಲ್ಲಿ ಮತ್ತಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರೆಹಾನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.