Recent Posts

Monday, August 17, 2026
ದೆಹಲಿರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಜಾಹೀರಾತು


ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಈ ಚರ್ಚೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿಯವರ ಮಾರ್ಗದರ್ಶನ ಮಹಾರಾಷ್ಟ್ರದ ಬೆಳವಣಿಗೆಗೆ ಅತ್ಯಂತ ಮುಖ್ಯವಾದುದು. ಈ ಭೇಟಿಯು ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ಅಭಿವೃದ್ಧಿ ದೃಷ್ಟಿಯಿಂದ ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ಅವರು ನೀಡುವ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.

ಪ್ರಧಾನಮಂತ್ರಿಯವರೊಂದಿಗಿನ ಮಾತುಕತೆಯ ಬಳಿಕ ಮುಂಬೈಗೆ ವಾಪಸಾಗಲಿರುವ ಮುಖ್ಯಮಂತ್ರಿಗಳು, ಮಂಗಳವಾರ (ಆ.18) ಮುಂಬೈನ `ದಿ ಲಲಿತ್’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಆಯೋಜಿಸಲಾಗಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಭೇಟಿಯಾದ ʻಮಹಾʼ ಸಿಎಂ:
ಇದೇ ವೇಳೆ ನಿರ್ಮಾಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬೈ-ವಧವನ್ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯಾದ ಉತ್ತನ್-ವಿರಾರ್ ಸಮುದ್ರ ಸೇತುವೆ ನಿರ್ಮಾಣಕ್ಕಾಗಿ ಜಪಾನ್ ಇಂಟರ್‌ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA)ಯಿಂದ ಧನಸಹಾಯವನ್ನು ಪಡೆಯಲು ಅನುಮೋದನೆ ಕೋರಿ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.