
ಅಬುಧಾಬಿ: ಕ್ಷಿಪಣಿ ದಾಳಿಗಳ ಬಳಿಕ ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ ಮತ್ತು ಹಣಕಾಸು ವ್ಯವಹಾರಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಸ್ಥಗಿತಗೊಳಿಸಿದೆ.
ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇರಾನ್‌ನೊಂದಿಗಿನ ಎಲ್ಲಾ ವ್ಯಾಪಾರ, ವಾಣಿಜ್ಯ ವಿನಿಮಯ ಮತ್ತು ಹಣಕಾಸು ವಹಿವಾಟುಗಳನ್ನು ಮುಂದಿನ ಸೂಚನೆ ಬರುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಯುಎಇ ವಿದೇಶಾಂಗ ಸಚಿವಾಲಯದ ಸಂವಹನ ನಿರ್ದೇಶಕ ಅಫ್ರಾ ಅಲ್ ಹಮೇಲಿ ಹೇಳಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸಂಭಾವ್ಯ ಕ್ಷಿಪಣಿ ಬೆದರಿಕೆಗಳು ಇದೆ. ತಕ್ಷಣವೇ ಹತ್ತಿರದ ಸುರಕ್ಷಿತ ಸ್ಥಳಗಳಲ್ಲಿ ಇರಿ ಎಂದು ಜನತೆಗೆ ಆಂತರಿಕ ಸಚಿವಾಲಯವು ಎಚ್ಚರಿಕೆ ನೀಡಿದೆ.










